Kannada NewsKarnataka NewsLatestPolitics
*ಅವರಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿದ್ದರೆ ಸೇರಿಸಿಕೊಳ್ಳಿ; ಆಪರೇಷನ್ ಅಗತ್ಯವಿಲ್ಲ ಎಂದ ಹೈಕಮಾಂಡ್*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಲರ್ಟ್ ಆಗಿದ್ದು, ಆಪರೇಷನ್ ಹಸ್ತ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದಾರೆ.
ಬಿಜೆಪಿ, ಜೆಡಿಎಸ್ ನ 15 ನಾಯಕರು ಕಾಂಗ್ರೆಸ್ ಸೇರಲು ಸಿದ್ಧರಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ಜೊತೆ ಸಭೆ ನಡೆಸಿದ್ದು, ಸಭೆಯಲ್ಲಿ ಅವರಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿದ್ದರೆ ಸೇರಿಸಿಕೊಳ್ಳಿ; ಆಪರೇಷನ್ ಅಗತ್ಯವಿಲ್ಲ ಎಂದು ಹೈಕಮಾಂಡ್ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಈ ಮೂಲಕ ಲೋಕಸಭಾ ಚುನಾವಣೆಗೆ ಲಾಭವಾಗುವ ರೀತಿಯಲ್ಲಿ ಕೋಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ