*BJP-JDS ಮೈತ್ರಿ ಅಧಿಕೃತ ಘೋಷಣೆ; ಅಮಿತ್ ಶಾ, ನಡ್ಡಾ ಭೇಟಿ ಬಳಿಕ HDK ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಪಕ್ಷಗಳು ಮೈತ್ರಿಗೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಚರ್ಚಿಸಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಚರ್ಚಿಸಿದರು. ಅಲ್ಲದೇ 6 ಕ್ಷೇತ್ರಗಳಿಗಾಗಿ ಜೆಡಿಎಸ್ ಬೇಡಿಕೆ ಇಟ್ಟಿದೆ ಎಂದು ತಿಳಿದುಬಂದಿದೆ.
ಬಿಜೆಪಿ ನಾಯಕರ ಭೇಟಿ ಬಳಿಕ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಖಚಿತ. ಈ ಬಗ್ಗೆ ಅಧಿಕೃತವಾಗಿ ಕೆಲ ವಿಚಾರ ಚರ್ಚಿಸಿದ್ದೇವೆ ಎಂದರು.
ಎಷ್ಟು ಸೀಟ್ ಗಳನ್ನು ನಮಗೆ ಕೊಡುತ್ತಾರೆ ಎಂಬುದು ಮುಖ್ಯವಲ್ಲ. ರಾಜ್ಯದ 28 ಕ್ಷೇರಗಳಲ್ಲಿಯೂ ಬಿಜೆಪಿ, ಜೆಡಿಎಸ್ ಗೆಲ್ಲುವುದೇ ಮುಖ್ಯ ಎಂದು ಹೇಳಿದರು. ಮೈತ್ರಿ ವಿಚಾರ ಅಷ್ಟೇ ಅಲ್ಲ, ರಾಜ್ಯಕ್ಕೆ ಸಂಬಂಧಿಸಿದ ಅನೇಕ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಕಾವೇರಿ ನದಿ ನೀರಿನ ವಿಚಾರವಾಗಿಯೂ ಚರ್ಚಿಸಿದ್ದೇವೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ