Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿನ್ನೆ ರಾತ್ರಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿತ್ತು. ಇಂದು ಕೂಡ ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆಯಾಗಲಿದೆ.

Home add -Advt

ಕರಾವಳಿ ಜಿಲ್ಲೆಗಲಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಕೋಲಾರ, ತುಮಕೂರು, ಬೆಂಗಳುರು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ರಾಯಚೂರು, ವಿಜಯಪುರ ಜಿಲ್ಲೆಯ ಕೆಲವೆಡೆಗಳಲ್ಲಿ ಮಳೆಯಾಗಲಿದೆ. ಸೆ.27ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button