Kannada NewsLatestNational

*ಭೀಕರ ಕಾರು ಅಪಘಾತ; ಐವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಭೀಕರ ಕಾರು ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

Home add -Advt

ಕಾರು ಉಮಾರಿಯಾದಿಂದ ಶಹದೋಲ್ ಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಮೂವರು ಸರ್ಕಾರಿ ಉದ್ಯೋಗಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


Related Articles

Back to top button