Kannada NewsKarnataka NewsLatest

*PSI ನೇಮಕಾತಿ ಅಕ್ರಮ: ಅಮೃತ್ ಪಾಲ್ ಗೆ ಜಾಮೀನು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಜೈಲು ಸೇರಿದ್ದ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿಬಂದಿತ್ತು. ಸ್ವತ: ಪೊಲೀಸ್ ಅಧಿಕರಿಗಳೇ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಪ್ರಕರಣದಲ್ಲಿ ಜೈಲು ಸೇರಿದ್ದ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಇದೀಗ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 5 ಲಕ್ಷ ರೂಪಾಯಿ ಬಾಂಡ್, ಇಬ್ಬರು ಶ್ಯೂರಿಟಿ ಹಾಗೂ ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಬಾರದು, ಕೋರ್ಟ್ ಅನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣ ಮಾಡುವಂತಿಲ್ಲ ಎಂದು ಷರತ್ತುಗಳನ್ನು ವಿಧಿಸಲಾಗಿದೆ.

ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಅಮೃತ್ ಪಾಲ್ ಗಿಂತ ಕಿರಿಯರು ತನಿಖಾಧಿಕಾರಿಗಳಾಗಿದ್ದಾರೆ. ಇವರಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸುವಂತೆ ಎಸ್ ಪಿಪಿ ಪ್ರಸನ್ನಕುಮಾರ್ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. ಅದರಂತೆ ಕೋರ್ಟ್, ಬೆದರಿಕೆ ಹಾಕದಂತೆ ಷರತ್ತು ವಿಧಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button