ಪ್ರಗತಿವಾಹಿನಿ ಸುದ್ದಿ, ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಕಾಶ್(20), ಹೇಮಂತ್(28) ಹಾಗೂ ಶಿವಕುಮಾರ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಉಜ್ವಲ್ ಕೃಷ್ಣ ಎಂಬುವವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಾರು ಬೆಂಗಳೂರಿನಿಂದ ಪಾವಗಡ ಕಡೆ ಬರುತ್ತಿದ್ದು ಲಾರಿ ಪಾವಗಡದಿಂದ ತುಮಕೂರು ಕಡೆ ಹೊರಟಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ