Kannada NewsKarnataka NewsLatest

*ಕಾವೇರಿ ಕಿಚ್ಚು: ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದ ರೈತ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು : ಕಾವೇರಿ ನೀರಿಗಾಗಿ ಪ್ರತಿಭಟನೆ ತೀವ್ರಗೊಂಡಿದ್ದು, ಕರ್ನಾಟಕ ಜಲಸಂರಕ್ಷಣಾ ಸಮಿತಿ ಕರೆ ನೀಡಿರುವ ಬೆಂಗಳೂರು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ರೈತಪರ ಸಂಘಟನೆ ಹಾಗೂ ಕನ್ನಡಪರ ಸಂಘಟನೆ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನದೆಸಿದ್ದಾರೆ. ಪ್ರತಿಭಟನೆಯ ವೇಳೆ ರೈತರೊಬ್ಬರು ಮರಕ್ಕೆ ನೇಣು ಹಾಕಿಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ.

Home add -Advt

ಕಾವೇರಿ ನೀರಿಗಾಗಿ ಆಗ್ರಹಿಸಿ ರೈತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ರೈತನನ್ನು ಪೊಲೀಸರು ರಕ್ಷಿಸಿದ್ದಾರೆ. ರೈತ ಅಸ್ವಸ್ಥನಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button