
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಕರ್ನಾಟಕ ಜಲಸಂರಕ್ಷಣಾ ಸಮಿತಿ ಕರೆ ನೀಡಿರುಬ ಬೆಂಗಳೂರು ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ.
ಒಂದೆಡೆ ಬಂದ್ ಗೆ ಬೆಂಬಲ ಸೂಚಿಸಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರತಿಭಟನೆಯಲ್ಲಿ ಭಗಿಯಾಗಿದ್ದರೆ, ಇನ್ನೊಂದೆಡೆ ರೈತ ಸಂಘಟನೆ ಕಾರ್ಯಕರ್ತರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಈ ನಡುವೆ ಬೆಂಗಳೂರು ಭದ್ರತೆಗೆ ನೀಯೋಜಿಸಿದ್ದ ಪೊಲೀಸರಿಗಾಗಿ ತಂದಿದ್ದ ಆಹಾರದಲ್ಲಿ ಇಲಿಯೊಂದು ಪತ್ತೆಯಾಗಿದೆ.
ಬಂದ್ ಹಿನ್ನೆಲೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಯಶವಂತಪುರ ಟ್ರಾಫಿಕ್ ಪೊಲೀಸರಿಗೆ ತಂದಿದ್ದ ಊಟದಲ್ಲಿ ಇಲಿ ಪತ್ತೆಯಾಗಿದೆ. ಊಟದಲ್ಲಿದ್ದ ಇಲಿ ಕಂಡು ಪೊಲೀಸರೇ ದಂಗಾಗಿದ್ದಾರೆ.