ಮತ್ತೆ ತಮಿಳುನಾಡಿಗೆ ನೀರು ಹರಿಸಲು ಆದೇಶ:
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯ ಸರ್ಕರಕ್ಕೆ CWRC ಮತ್ತೆ ಶಾಕ್ ನೀಡಿದೆ. ತಮಿಳುನಾಡಿಗೆ ಮತ್ತೆ 3000 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕರಕ್ಕೆ ಆದೇಶ ನೀಡಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆಗಳು ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ.
ಕಾವೇರಿ ನೀರು ಹರಿಸಲು ಆದೇಶ ಅವಧಿ ಮುಕ್ತಾಯಗೊಂಡ ಹಿನ್ನೆಲೆರ್ಯಲ್ಲಿ ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯಿತು. ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಅಧಿಕಾರಿಗಳು ಭಗಿಯಾಗಿದ್ದರು.
ರಾಜ್ಯದ ಅಧಿಕರಿಗಳು ಕಾವೇರಿ ಕೊಳ್ಳದಲ್ಲಿ ನೀರಿಲ್ಲ ಎಂಬ ವಾಸ್ತವಾಂಶ ತಿಳಿಸಿದರು. ಎರಡೂ ಕಡೆಯ ವಾದ ಆಲಿಸಿದ CWRC ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿದೆ.
ಸಿಡಬ್ಲು ಆರ್ ಸಿ ಆದೇಶದ ಬೆನ್ನಲ್ಲೇ ರೈತರ ಪ್ರತಿಭಟನೆಗಳು ಭುಗಿಲೆದ್ದಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ