ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಿದರು.
ಚಾಮರಾಜನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಕುಡಿಯುವ ನೀರಿನ ಸಮಸ್ಯೆ ಬಗೆಹಸುವ ನಿಟ್ಟಿನಲ್ಲಿ ಹಾಗೂ ಜಿಲ್ಲೆಯ ಅಭಿವೃದ್ದಿಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಸೂಚಿಸಿದರು.
ಅಧಿಕಾರಿಗಳಿಗೆ ಕೊಟ್ಟ ಸೂಚನೆಗಳು ಹೀಗಿವೆ…
⦁ ಜೂನ್‌ನಿಂದ ಆಗಸ್ಟ್‌ವರೆಗೂ ಅಗತ್ಯವಾದಷ್ಟು ಮಳೆ ಆಗದ ಕಾರಣದಿಂದ ಬರದ ಮತ್ತು ಸಂಕಷ್ಟದ ಪರಿಸ್ಥಿತಿ ಇದೆ.
⦁ 161 ತೀವ್ರ ಬರಗಾಲ, 34 ತಾಲ್ಲೂಕುಗಳು ಸಾಧಾರಣ ಬರಗಾಲದ ಸ್ಥಿತಿ ಇದೆ. ಇದಕ್ಕೆ ಇನ್ನಷ್ಟು ತಾಲ್ಲೂಕುಗಳು ಸೇರಬಹುದು.
⦁ ಡಿಸಿ ಮತ್ತು ಸಿಇಒ ಗಳ ಸಭೆಯಲ್ಲಿ ಕೆಲವು ನಿರ್ದೇಶನಗಳನ್ನು ನೀಡಿದ್ದೇನೆ. ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಸ್ಪಷ್ಟ ನಿರ್ದೇಶನ ನೀಡಿದ್ದೇನೆ. ಹಣಕ್ಕೆ ಯಾವುದೇ ಕೊರತೆ ಇಲ್ಲ.
⦁ ಯಾವುದೇ ಮೂಲದಿಂದಾದರೂ ಸರಿ. ಕುಡಿಯುವ ನೀರಿಗೆ ಕೊರತೆ ಆಗಬಾರದು. ಸಾವಜನಿಕರಿಂದ ದೂರುಗಳು ಬರಬಾರದು.
⦁ ಡಿಸಿ, ಸಿಇಒ ಮತ್ತು ಉಸ್ತುವಾರಿ ಕಾಯದರ್ಶಿಗಳು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು.
⦁ ಬರಗಾಲದ ಕಾರಣದಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ವಿದ್ಯುತ್ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ.
⦁ ಕೆಲಸ ಹುಡುಕಿಕೊಂಡು ವಲಸೆ ಹೋಗುವ, ಗುಳೆ ತೆರಳುವ ಸ್ಥಿತಿ ಬಾರದಂತೆ, ನರೇಗಾ ಯೋಜನೆಯನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು. ೧೫೦ ದಿನ ಕೆಲಸ ಕೊಡಬೇಕು. ಉದ್ಯೋಗ ಸೃಷ್ಟಿಯ ಇತರೆ ಸಾಧ್ಯತೆಗಳನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಬೇಕು.
⦁ ಮುಂದಿನ ದಿನಗಳಲ್ಲಿ ಜಾನವಾರುಗಳಿಗೆ ನೀರು, ಮೇವು ಕೊರತೆ ಆಗಬಾರದು. ಹೀಗಾಗಿ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಹೊರ ರಾಜ್ಯಗಳಿಗೆ ಮೇವು ಹೋಗದಂತೆ ತಡೆಯಬೇಕು. ರಾಸುಗಳಿಗೆ ಕಾಯಿಲೆ ಬರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಅಗತ್ಯ ಎಲ್ಲಾ ಲಸಿಕೆ ಮತ್ತು ಔಷಧಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು.
⦁ ಖಾಸಗಿಯಾಗಿ ಸಾಲ ಕೊಟ್ಟವರು ರೈತರಿಗೆ ಬಲವಂತದ ವಸೂಲಿ ಮಾಡದಂತೆ ಕ್ರಮ ಕೈಗೊಳ್ಳಬೇಕು. ಬರದ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಶೋಷಣೆ ಮಾಡದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು.
⦁ ಕೃಷಿ ಇಲಾಖೆ ರೈತರಿಗೆ ಮತ್ತೆ ಮತ್ತೆ ಬೀಗ, ಗೊಬ್ಬರ, ಔಷಧಿ ಸರಬರಾಜು ಮಾಡಬೇಕು. ಒಮ್ಮೆ ಕೊಟ್ಟ ಬಳಿಕ ಕೈಕಟ್ಟಿ ಕೂರಬಾರದು. ಯಾವುದೇ ಕಾರಣಕ್ಕೆ ಬೆಳೆಹಾನಿ ಸಂಭವಿಸಿದರೆ ಮತ್ತಎ ಹೊಸದಾಗಿ ರೈತರಿಗೆ ಇವೆಲ್ಲವನ್ನೂ ವಿತರಿಸಬೇಕು. ಪರ್ಯಾಯ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕು.
⦁ ಇದುವರೆಗೂ ನಾನು ಹೇಳಿದ ಎಲ್ಲವನ್ನೂ ಕಟ್ಟು ನಿಟ್ಟಾಗಿ ಪಾಲಿಸಬೇಕು. ಇವುಗಳ ಬಗ್ಗೆ ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳು ಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಖಚಿತ.
⦁ ಜಿಲ್ಲಾಧಿಕಾರಿಗಳು ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸಮನ್ವಯ ಸಾಧಿಸಿ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು.
⦁ ಚುನಾವಣೆಗೆ ಮೊದಲು ನಾವು ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ನಾಲ್ಕನ್ನು ಈಗಾಗಲೇ ಜಾರಿ ಮಾಡಿಯಾಗಿದೆ. ಈ ನಾಲ್ಕೂ ಗ್ಯಾರಂಟಿಗಳನ್ನು ಪರಿಣಾಮಕಾರಿಯಾಗಿ ಜನರಿಗೆ, ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಇದರಲ್ಲಿ ಯಾವುದೇ ಲೋಪ ಆಗಬಾರದು ಎಂದು ಸೂಚಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ