Kannada NewsKarnataka NewsLatest

*ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ; ಶಿವಮೊಗ್ಗದಲ್ಲಿ ಲಾಠಿ ಚಾರ್ಜ್*

ಮಲೆನಾಡಿನಲ್ಲಿ ಮತ್ತೆ ಪರಿಸ್ಥಿತಿ ಉದ್ವಿಗ್ನ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದಲ್ಲಿ ನಡೆದಿದೆ.

Home add -Advt

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಉದ್ರಿಕ್ತರ ಗುಂಪು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ಮೇಲೂ ಕಲ್ಲೆಸೆಯಲಾಗಿದೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಬ್ಯಾರಿಕೇಡ್ ಗಳನ್ನು ತಗ್ಗಿ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಸಧ್ಯ ರಾಗಿಗುಡ್ಡದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗಲಭೆ ಸಂಬಂಧ 7 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Related Articles

Back to top button