ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ರಾಗಿಗುಡ್ಡದಲ್ಲಿ ಎರಡು ದಿನಗಳ ಹಿಂದೆ ಈದ್ ಮಿಲಾದ್ ಮೆರವಣಿಗೆ ವೇಳೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿತ್ತು. ಘಟನೆಯಲ್ಲಿ ಪೊಲೀಸರು ಸೇರಿದಂತೆ 7 ಜನರು ಗಾಯಗೊಂಡಿದ್ದಾರೆ. ಈ ಘಟನೆ ಬೆನ್ನಲ್ಲೇ ರಾಗಿಗುಡ್ಡದಲ್ಲಿ ಉದ್ವಿಗ್ನ ಪರಿಸ್ಥಿತಿಯುಂಟಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. 8 ಜನರು ತಲೆಮರೆಸಿಕೊಂಡಿದ್ದಾರೆ. 60 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಘಟನೆಯ ಫೋಟೋ, ವಿಡಿಯೋ ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ ಎಂದು ಎಸ್ ಪಿ ಮಿಥುನ್ ಕುಮರ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ