Kannada NewsKarnataka NewsLatest

*ವೃಕ್ಷಮಾತೆ ಸಾಲು ಪಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ; ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದ ಪುತ್ರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವೃಕ್ಷ ಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಬೆನ್ನಲ್ಲೇ ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ಅವರ ದತ್ತುಪುತ್ರ ವನಸಿರಿ ಸ್ಪಷ್ಟನೆ ನೀಡಿದ್ದು, ಸಾಲುಮರದ ತಿಮ್ಮಕ್ಕ ಆರೋಗ್ಯಸ್ಥಿರವಾಗಿದೆ. ವದಂತಿಗೆ ಕಿವಿಗೊಡಬೇಡಿ ಎಂಡು ಮನವಿ ಮಾಡಿದ್ದಾರೆ.

Home add -Advt

ಸಾಲುಮರದ ತಿಮ್ಮಕ್ಕ ನಿನ್ನೆ ಅನಾರೋಗ್ಯಕ್ಕೀದಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಯಾರೋ ಒಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ನಿಧನ ಸುದ್ದಿ ಹಾಕಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸಾಲುಮರದ ತಿಮ್ಮಕ್ಕ ಅವರ ದತ್ತುಪುತ್ರ ಮಾಹಿತಿ ನೀಡಿದ್ದು, ಸಾಲುಮರದ ತಿಮ್ಮಕ್ಕ ಆರೋಗ್ಯದಿಂದ ಇದ್ದಾರೆ. ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದಾರೆ. ಸಾಲುಮರದ ತಿಮ್ಮಕ್ಕ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಡಾ.ರವೀಂದ್ರ ಮೆಹ್ತಾ ಹಾಗೂ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.


Related Articles

Back to top button