Kannada NewsKarnataka NewsLatestPolitics

*ನಾವು ಸೂಜಿ ತರ ಕೆಲಸ ಮಾಡಿದರೆ ಬಿಜೆಪಿಯವರು ಕತ್ತರಿ ತರ ಕೆಲಸ ಮಾಡುತ್ತಿದ್ದಾರೆ; ಡಿ.ಕೆ.ಶಿವಕುಮಾರ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಸತ್ಯಶೋಧನಾ ಸಮಿತಿ ಭೇಟಿ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ಸಮಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವು ಸೂಚಿ ತರಹ ಕೆಲಸ ಮಾಡಿದರೆ ಬಿಜೆಪಿ ಕತ್ತರಿ ತರ ಕೆಲಸ ಮಾಡುತ್ತದೆ. ಅವರ ಸತ್ಯ ಶೋಧಕ ಏನಿದೆ? ಸಮಾಜ ಒಡೆಯುವ ಕೆಲಸ ಮಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Home add -Advt

ನಾವು ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತಿದ್ದೇವೆ. ಅವರು ಕತ್ತಿ ತರಹ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿಗೆ ಇರುವ ವ್ಯತ್ಯಾಸ ಎಂದರು.

ನಮ್ಮ ಅಧಿಕಾರಿಗಳು ಶಿವಮೊಗ್ಗದಲ್ಲಿ ಎಲ್ಲಾ ರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ. ಶಾಂತಿ ಕಾಪಾಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Related Articles

Back to top button