ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮೆಟ್ರೋದಲ್ಲಿ ಮಹಿಳೆಯೊಬ್ಬಳೊಂದಿಗೆ ಕುಚೇಷ್ಟೆಗಿಳಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಜ್ವಲ್ (23) ಬಂಧಿತ. ಈತ ಸಾಮಾಜಿಕ ಜಾಲತಾಣದಲ್ಲಿ ಪ್ರ್ಯಾಂಕ್ ವೀಡಿಯೊಗಳನ್ನು ಪೋಸ್ಟ್ ಮಾಡಲು ಮೆಟ್ರೋ ನಿಲ್ದಾಣದಲ್ಲಿ ಎಸ್ಕಲೇಟರ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರನ್ನು ಹೆದರಿಸಲು ಪ್ರಯತ್ನಿಸಿದ್ದ.
ಈತನ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ