*ಅತ್ತಿಬೆಲೆ ಪಟಾಕಿ ದುರಂತ: ಗೋದಾಮಿನ ಮಾಲೀಕರ ಮೇಲೆ ಕ್ರಮ; ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತ್ತಿಬೆಲೆಯಲ್ಲಿ ನಡೆದಿರುವ ಅಗ್ನಿ ದುರಂತದಲ್ಲಿ ಗೋದಾಮಿನ ಮಾಲೀಕರ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಆನೇಕಲ್ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಚಿವರಾದ ರಾಮಲಿಂಗರೆಡ್ಡಿ, ಬೈರತಿ ಸುರೇಶ್, ಮಾಜಿ ಸಚಿವ ಎಸ್ ಟಿ ಸೋಮಶೇಖರ್, ಶಾಸಕ ಶಿವಣ್ಣ ಮತ್ತಿತರರು ಜತೆಗಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದುರಂತದಲ್ಲಿ 14 ಜನ ಮೃತಪಟಿದ್ದು, ಪಟಾಕಿ ಗೋದಾಮಿನಲ್ಲಿ ಮುನ್ನೆಚ್ಚರಿಕಾ ಹಾಗೂ ಸುರಕ್ಷಾ ಕ್ರಮಗಳನ್ನು ಕೈಗೊಂಡಿದ್ದಾರೆಯೇ ಎಂಬುದನ್ನು ಪರಿಶೀಲಿಸಿದ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಕೇಂದ್ರ ಬರ ಅಧ್ಯಯನ ತಂಡ ಕಾಟಾಚಾರಕ್ಕೆ ಅಧ್ಯಯನ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿರುವ ಬಗ್ಗೆ ಮಾತನಾಡಿ ವಸ್ತುಸ್ಥಿತಿಯನ್ನು ಕೇಂದ್ರ ಸರ್ಕಾರಕ್ಕೆ ವರದಿ ಮಾಡಲು ತಂಡಕ್ಕೆ ತಿಳಿಸಲಾಗಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ