ಗುರುತಿನ ಚೀಟಿಗಳನ್ನು ಆನ್‌ಲೈನ್ ಮೂಲಕ ಪಡೆದುಕೊಳ್ಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
2018-19 ನೇ ಸಾಲಿನಿಂದ ರಾಜ್ಯದ ಹಿರಿಯ ನಾಗರಿಕರಿಗೆ ಗುರುತಿನ ಚೀಟಿಗಳನ್ನು ಆನ್‌ಲೈನ್ ಮುಖಾಂತರ ವಿತರಿಸಲು ಸೇವಾ ಸಿಂಧು ಪೋರ್ಟಲ್‌ನ್ನು ಪ್ರಾರಂಭಿಸಲಾಗಿದೆ.
ಈ ಮೊದಲು ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಳನ್ನು ವಿತರಿಸುತ್ತಿರುವ ಎಲ್ಲಾ ಸ್ವಯಂ-ಸೇವಾ ಸಂಸ್ಥೆಯವರಿಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಲಾಗಿದೆ.
ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು ಯಾವುದೇ ಸ್ವಯಂ-ಸೇವಾ ಸಂಸ್ಥೆಯವರು ನೀಡುವ (ಮ್ಯಾನುವಲ್) ಗುರುತಿನ ಚೀಟಿಗಳನ್ನು ಪಡೆಯದೇ ಸೇವಾ ಸಿಂಧು ಸರ್ವಿಸ್ ಪ್ಲಸ್ ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಇಲಾಖೆಯ ಅಧಿಕಾರಿಗಳ ಡಿಜಿಟಲ್ ಸಹಿಯೊಂದಿಗೆ ಆನ್‌ಲೈನ್ ಮೂಲಕ ಮಾತ್ರ ಗುರುತಿನ ಚೀಟಿಗಳನ್ನು ಪಡೆಯಬೇಕು.
ಒಂದು ವೇಳೆ ಯಾವುದೇ ಸ್ವಯಂ-ಸೇವಾ ಸಂಸ್ಥೆಯವರು ಮ್ಯಾನುವಲ್ ಗುರುತಿನ ಚೀಟಿಗಳನ್ನು ವಿತರಿಸುತ್ತಿರುವುದು ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳಿಗೆ ಲಿಖಿತ ದೂರು ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 0831-24760967 ಗೆ ಸಂಪರ್ಕಿಸಬೇಕು ಎಂದು ಬೆಳಗಾವಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////
ಉಚಿತ ತಾಂತ್ರಿಕ ತರಬೇತಿಗೆ ಅರ್ಜಿ ಆಹ್ವಾನ
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಿಂದ ವಿಶೇಷ ಘಟಕ ಯೋಜನೆ (ವಿಘಯೋ) ಮತ್ತು ಗಿರಿಜನ ಉಪಯೋಜನೆಯಡಿ ಹಾಗೂ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಟರ್ನರ್, ಮಿಲ್ಲರ್, ಗ್ರೈಂಡರ್ , ಟೂಲ್ ರೂಮ್ ಮಷಿನಿಷ್ಟ ಕೋರ್ಸ್ಗಳಲ್ಲಿ ತರಬೇತಿ ಪಡೆಯಲು ಮತ್ತು ಸಿ.ಎನ್.ಸಿ ಮಿಲ್ಲಿಂಗ್, ಟರ್ನಿಂಗ್, ಕ್ಯಾಡ್ ಕ್ಯಾಮ್ ಮತ್ತು ಸಿ.ಎಮ್.ಎಮ್ ಕೋರ್ಸ್ಗಳಲ್ಲಿ ತರಬೇತಿ ಪಡೆಯಲು ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು, ಕನಿಷ್ಠ 16 ಗರಿಷ್ಠ 40 ವರ್ಷ ವಯಸ್ಸಾಗಿರಬೇಕು. ಐ.ಟಿ.ಐ, ಡಿಫ್ಲೋಮಾ, ಇಂಜಿನಿಯರಿಂಗ್ ತೇರ್ಗಡೆಯಾಗಿರಬೇಕು.
ಅರ್ಜಿ ಸಲ್ಲಿಸಲು ಅಗಸ್ಟ್ 21 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬೆಳಗಾವಿ ಉದ್ಯಮಭಾಗ, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ದೂರವಾಣಿ ಸಂಖ್ಯೆ 0831-2442407, ಮೊ. ಸಂಖ್ಯೆ, 9141630309, 9739820219 ಸಂಪರ್ಕಿಸಬೇಕು ಎಂದು ಬೆಳಗಾವಿ ಜಿಟಿಟಿಸಿ, ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ