ಪ್ರಗತಿವಾಹಿನಿ ಸುದ್ದಿ; ಧಾರವಾಡ: ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಅಬಕಾರಿ ಇಲಾಖೆ ಡಿವೈಎಸ್ ಪಿ ಹಿಂಬಾಗಿಲಿನಿಂದ ಎಸ್ಕೇಪ್ ಆಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮದ್ಯದಂಗಡಿ ತೆರೆಯಲು ಅನುಮತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಹಿನ್ನೆಲೆಯಲ್ಲಿ ದಾವಣಗೆರೆ ಅಬಕಾರಿ ಇಲಾಖೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಡಿವೈಎಸ್ ಪಿ ರವಿ ಮರಿಗೌಡರ ಇತ್ತ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಹಿಂಬಾಗಿಲಿನಿಂದ ಅಧಿಕಾರಿಗಳ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಹರಿಹರ ಮೂಲದ ರಂಗನಾಥ್ ಎಂಬುವವರಿಂದ 3 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಪ್ರಮುಖ ಆರೋಪಿ ಅಬಕಾರಿ ಡಿವೈಎಸ್ ಪಿ ರವಿ ಮರಿಗೌಡರ ತಪ್ಪಿಸಿಕೊಂಡಿದ್ದಾರೆ. ಇದೇ ಪ್ರಕರಣದಲ್ಲಿ ಅಬಕಾರಿ ಇಲಾಖೆ ಉಪ ಆಯುಕ್ತೆ ಸ್ವಪ್ನಾ, ಹರಿಹರ ಅಬಕಾರಿ ನಿರೀಕ್ಷಕಿ ಶೀಲಾ, ಅಬಕಾರಿ ಇಲಾಖೆ ಎಫ್ ಡಿಸಿ ಹೆಚ್.ಎಂ.ಅಶೋಕ್, ಎಸ್ ಡಿಸಿ ಶೈಲಶ್ರೀ ಅವರನ್ನು ಬಂಧಿಸಲಾಗಿದೆ.
ಎಸ್ಕೇಪ್ ಆಗಿರುವ ಅಬಕಾರಿ ಡಿವೈ ಎಸ್ ಪಿ ರವಿ ಮರಿಗೌಡರ್ ಮೂಲತ: ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ