Belagavi NewsBelgaum NewsKannada NewsKarnataka NewsLatest

*ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಬ್ಬೂರ ಪಟ್ಟಣದ ಜೈ ಹನುಮಾನ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಮೃತ ವ್ಯಕ್ತಿ ಚಿಕ್ಕೋಡಿ ತಾಲೂಕಿನ ಮೀರಾಪುರ ಹಟ್ಟಿ ಗ್ರಾಮದ ಮಾಯಪ್ಪ. ಭೀಮಪ್ಪ. ಭೋದಿಹಾಳ (35) ಎಂದು ತಿಳಿದುಬಂದಿದೆ. ಇನ್ನೋರ್ವ ಬೈಕ್ ಸವಾರ ನಾಗರಮುನ್ನೋಳ ಗ್ರಾಮದ ಲಾಡಜಿ.ಚಾಂದಸಾಬ. ಮುತ್ತಾನಿ (25) ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಪಟ್ಟಣದ ಜೈ ಹನುಮಾನ ಪೆಟ್ರೊಲ್ ಬಂಕ್ ನಲ್ಲಿ ಬೈಕಿಗೆ ಪೆಟ್ರೋಲ್ ತುಂಬಿಸಿಕೊಂಡು ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಚಿಕ್ಕೋಡಿ ಪಿಎಸ್ ಐ ಬಸಗೌಡ ನೆರ್ಲಿ ಹಾಗೂ ಸಿಬ್ಬಂದಿ ಬೇಟಿ ನೀಡಿ ಪ್ರಖರಣ ದಾಖಲಿಸಿಕೊಂಡಿದ್ದಾರೆ.


Related Articles

Back to top button