Kannada NewsKarnataka NewsLatest

*ಡೆಂಗ್ಯೂ ಜ್ವರಕ್ಕೆ ಮತ್ತೋರ್ವ ಬಲಿ*

ಪ್ರಗತಿವಾಹಿನಿ ಸುದ್ದಿ; ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಚ್ಚುತ್ತಿದ್ದು, ಮಹಾಮಾರಿ ಡೆಂಗ್ಯೂಗೆ ಮತ್ತೋರ್ವ ಬಲಿಯಾಗಿದ್ದಾರೆ.

77 ವರ್ಷದ ಮಿರಾನ್ ಸಾದಾ ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭಟ್ಕಳದ ಖಾಜಿಯಾ ಸ್ಟ್ರೀಟ್ ನಿವಾಸಿ ಮಿರಾನ್ ಸಾದಾ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

Home add -Advt

ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಡೆಂಗ್ಯೂ ಭೀತಿ ಹೆಚ್ಚಿದ್ದು, ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚಿಸಲಾಗಿದೆ.

Related Articles

Back to top button