ಪ್ರಗತಿವಾಹಿನಿ ಸುದ್ದಿ; ಮೈಸೂರು: ಈ ಬಾರಿ ಮಹಿಳೆಯೊಬ್ಬರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ಅಲ್ಲದೇ ಇಂದು ಮೈಸೂರಿನಲ್ಲಿ ಮಾವುತರು ಹಾಗೂ ಕಾವಾಡಿಗರಿಗೆ ಉಪಹಾರ ವ್ಯವಸ್ಥೆ ಆಯೋಜಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ರಾಜ್ಯ ರಾಜಕೀಯಕ್ಕೆ ಮರಳುವಂತೆ ಸಂಸದ ಪ್ರತಾಪ್ ಸಿಂಹ ಹಾಗೂ ಬೆಂಬಲಿಗರು ಒತ್ತಾಯಿಸಿದ ಪ್ರಸಂಗ ನಡೆಯಿತು.
ಈ ಬೆಳವಣಿಗೆ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ನೇಮಕವಾಗುವ ಬಗ್ಗೆಯೂ ಚರ್ಚೆ ಆರಂಭವಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ಹಲವು ರಾಜ್ಯಗಳಿಗೆ ಭೇಟಿ ನೀಡುತ್ತಾ ನನ್ನ ಕೆಲಸವನ್ನು ನಿಭಾಯಿಸುತ್ತಾ ಖುಷಿಯಾಗಿದ್ದೇನೆ ಎಂದು ಹೇಳಿದರು.
ರಾಜ್ಯಾಧ್ಯಕ್ಷೆ ಸ್ಥಾನದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ವರಿಷ್ಠರಿಂದಲೂ ಸೂಚನೆ ಬಂದಿಲ್ಲ. ಇಂತಹ ಸುದ್ದಿ ಹೇಗೆ ಬರುತ್ತಿದೆ ಗೊತ್ತಿಲ್ಲ. ನನಗೆ ಒಳ್ಳೆಯ ಖಾತೆ ಸಿಕ್ಕಿದೆ. ಅಲ್ಲಿಯೇ ಒಳ್ಳೆ ಕೆಲಸ ಮಾಡುತ್ತಿದ್ದೇನೆ ಎಂದು ಹೇಳುವ ಮೂಲಕ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ನಿರಾಸಕ್ತಿ ತೋರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ