ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿಯ ವಿಧಾನಮಂಡಳದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ವಿಟಿಯು ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ಮುಂಜಾನೆ ಶಾಸಕರೊಂದಿಗೆ ಚರ್ಚಿಸಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ ಹಾಗೂ ಶಾಸಕರಾದ ಬಿ.ಸಿ.ಪಾಟೀಲ ಮತ್ತು ಆನಂದ ಸಿಂಗ್ ಅವರೊಂದಿಗೆ ಕುಮಾರಸ್ವಾಮಿ ಚರ್ಚೆ ನಡೆಸಿದರು.
ಈ ಮಧ್ಯೆ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿರುವ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರಕಾರದಲ್ಲಿ ನಡೆಯುತ್ತಿದ್ದ ಭಿನ್ನಮತೀಯ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ ಎಂದು ಹೇಳಲಾಗುತ್ತಿದೆ.
ಶಾಲಾ ಮಕ್ಕಳೊಂದಿಗೆ ಫೋಟೊ:
ವಿಟಿಯು ಕ್ಯಾಂಪಸ್ ನಲ್ಲಿ ಬುಧವಾರ ಬೆಳಗ್ಗೆಯೂ ವಾಕಿಂಗ್ ಮಾಡಿದ ಕುಮಾರಸ್ವಾಮಿ ಈ ವೇಳೆ ಅಲ್ಲಿಗೆ ಬಂದಿದ್ದ ಕೆಲವು ಶಾಲ ಮಕ್ಕಳೊಂದಿಗೆ ಫೋಟೋಕ್ಕೆ ಫೋಸ್ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ