ಹವಾಮಾನ ಇಲಾಖೆ ಮುನ್ಸೂಚನೆ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬರದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಕೊಂಚ ಸಮಾಧಾನಕರ ಸುದ್ದಿ ನೀಡಿದೆ. ರಾಜ್ಯದಲ್ಲಿ ಅಕ್ಟೋಬರ್ 29ರಿಂದ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
ಭಾನುವಾರದಿಂದ ಕೇರಳ, ತಮಿಳುನಾಡಿನಲ್ಲಿಯೂ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ