ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ನಡೆಯುವ ಹಿನ್ನೆಲೆಯಲ್ಲಿ ನವೆಂಬರ್ 4ರಿಂದ 6ರವರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ನವೆಂಬರ್ 4ರ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 6ರ ಬೆಳಿಗ್ಗೆ 10 ಗಂಟೆಯವರೆಗೆ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹಿನ್ನಮ್ಮನಹಳ್ಳ, ಮಾಣಿಕ್ಯಧಾರಾ, ಗಾಳಿಕೆರೆಗಳಿಗೆ ಪ್ರವಾಸಿಗರಿಗೆ ತೆರಳಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ