Kannada NewsKarnataka NewsLatest

*ಮತ್ತೊಂದು ಅಗ್ನಿ ಅವಘಡ; 10ಕ್ಕೂ ಹೆಚ್ಚು ಬಸ್ ಗಳಿಗೆ ಬೆಂಕಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. 10ಕ್ಕೂ ಹೆಚ್ಚು ಬಸ್ ಗಳಿಗೆ ಏಕಾಏಕಿ ಬೆಂಕಿ ತಗುಲಿದ್ದು, ನೋಡ ನೋಡುತ್ತಿದ್ದಂತೆಯೇ ಬಸ್ ಗಳು ಹೊತ್ತಿ ಉರಿದಿವೆ.

ಬೆಂಗಳೂರಿನ ವೀರಭದ್ರ ನಗರದಲ್ಲಿ ಈ ಘಟನೆ ನಡೆದಿದೆ. ಕಟ್ಟಿಂಗ್ ಹಾಗೂ ವೆಲ್ಡಿಂಗ್ ಮೆಷಿನ್ ಬಳಸಿ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಬಸ್ ಗಳಿಗೆ ಬೆಂಕಿಯ ಕಿಡಿ ತಗುಲಿದೆ. ಒಂದರ ಹಿಂದೊಂದರಂತೆ 10ಕ್ಕೂ ಹೆಚ್ಚು ಬಸ್ ಗಳು ಬೆಂಕಿಗಾಹುತಿಯಾಗಿವೆ.

ಘಟನಾ ಸ್ಥಳಕ್ಕೆ 2 ಅಗ್ನಿಶಾಮಕ ವಾಹನ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಸಿಬ್ಬಂದಿಗಳು ನಿರತರಾಗಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button