ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಳೆದ ಹಲವು ದಿನಗಳಿಂದ ಬಿರು ಬೇಸಿಗೆಯ ವಾತಾವರಣ ಸೃಷ್ಟಿಯಾಗಿದ್ದ ಬೆಳಗಾವಿಯಲ್ಲಿ ಸೋಮವಾರ ಸಂಜೆ ಭಾರಿ ಪ್ರಮಾಣದಲ್ಲಿ ಮಳೆ ಸುರಿಯಿತು.
ಮಧ್ಯಾಹ್ನ ನಂತರ ಮೋಡಕವಿದು ಮಳೆಯ ವಾತಾವರಣ ನಿರ್ಮಾಣವಾಯಿತು. ನಂತರ ಸಂಜೆ 5 ಗಂಟೆಯ ವೇಳೆಗೆ ಭಾರಿ ಅಬ್ಬರದೊಂದಿಗೆ ಮಳೆ ಆರಂಭವಾಯಿತು. ಬೆಳಗಾವಿ ನಗರ ಮತ್ತು ಸುತ್ತಲಿನ ಅನೇಕ ಪ್ರದೇಶಗಳಲ್ಲಿ ಸುಮಾರು 2 ಗಂಟೆಗಳಿಗೂ ಅಧಿಕ ಸಮಯ ಮಳೆ ಅಬ್ಬರಿಸಿತು.
ಅನಿರೀಕ್ಷಿತವಾಗಿ ಮಳೆ ಸುರಿದಿದ್ದರಿಂದ ಜನಜೀವನ ಅಸ್ತವ್ಯಸ್ತವಾಯಿತು. ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ವಾಹನ ಸಂಚಾರವೂ ಕಷ್ಟವಾಯಿತು. ಮಳೆ ಆರಂಭವಾಗುತ್ತಿದ್ದಂತೆ ನಗರದ ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಯಿತು. ಮಳೆ ನಿಂತು ಬಹು ಹೊತ್ತಿನ ನಂತರ ವಿದ್ಯುತ್ ಪುನಾರಂಭವಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ