Kannada NewsKarnataka NewsLatest

*ಶಾಪಿಂಗ್ ಮಾಲ್ ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ; ನಿವೃತ್ತ ಶಿಕ್ಷಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಮಾಲ್ ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಲುಲು ಮಾಲ್ ನಲ್ಲಿ ವ್ಯಕ್ತಿಯೋರ್ವ ಮಹಿಳೆಯರು, ಯುವತಿಯರನ್ನು ಹಿಂಬದಿಯಿಂದ ಬಂದು ಟಚ್ ಮಾಡಿ, ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ. ಶಾಪಿಂಗ್ ಗಾಗಿ ಮಾಲ್ ಗೆ ಬಂದ ಯಶವಂತ್ ಎಂಬುವವರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಈ ದೃಶ್ಯ ಸೆರೆ ಹಿಡಿದು, ಭದ್ರತಾ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದ. ಅಲ್ಲದೇ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದ.

Home add -Advt

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಮೂರು ದಿನಗಳಿಂದ ಈ ವಿಡಿಯೋ ವೈರಲ್ ಆಗಿತ್ತು. ಆರೋಪಿಯನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿದ್ದರು. ಬಸವೇಶ್ವರ ನಗರ ನಿವಾಸಿ ಅಶ್ವತ್ಥನಾರಾಯಣ (60) ಆರೋಪಿ ಎಂಬುದು ತಿಳಿದುಬಂದಿತ್ತು. ಅಲ್ಲದೇ ಆತ ನಿವೃತ್ತ ಶಿಕ್ಷಕ ಎಂಬುದು ತಿಳಿದುಬಂದಿದೆ.

ಪೊಲೀಸರು ಆರೋಪಿ ಮನೆಗೆ ತೆರಳಿ ಆತನನ್ನು ಬಂಧಿಸಲು ಮುಂದಾಗಿದ್ದರು. ಆದರೆ ಆರೋಪಿ ಮನೆಗೆ ಬೀಗ ಹಾಕಿ ತೆರಳಿದ್ದ. ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button