*ವಿಪಕ್ಷ ನಾಯಕನ ಆಯ್ಕೆ ವಿಚಾರ; ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ನಡೆದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಗುತ್ತಾ ಬಂದರೂ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಮಾತ್ರ ವಿಳಂಬವಾಗುತ್ತಲೇ ಇದೆ. ಈ ಬಗ್ಗೆ ಇಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಮಾತನಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯ ಕಾಂಗ್ರೆಸ್ ಸರ್ಕಾರ ಲೂಟಿ ಸರ್ಕಾರ. ಸರ್ಕಾರದ ಭ್ರಷ್ಟಾಚಾರ ಐಟಿ ದಾಳಿಯಲ್ಲಿ ಬಯಲಾಗಿದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ನಲ್ಲಿ ನಾಯಕತ್ವಕ್ಕಾಗಿ ಕಿತ್ತಾಟ ನಡೆಯುತ್ತಿದೆ. ಡಿಸಿಎಂ ಉಪಟಳಕ್ಕೆ ಕಡಿವಾಣ ಹಾಕಲು ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಸಿದ್ದರಾಮಯ್ಯನವರಿಗೆ ಸರ್ಕಾರ, ಸಚಿವರ ಮೇಲೆ ಹಿಡಿತವಿಲ್ಲದ ಸ್ಥಿತಿಯಿದೆ ಎಂದು ಆರೋಪಿಸಿದ್ದರು.
ಇದೇ ವೇಳೆ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ವಿಳಂಬದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಯಡಿಯೂರಪ್ಪ, ಸ್ಪಷ್ಟ ಉತ್ತರ ನೀಡಲು ಸಾಧ್ಯವಾಗಿಲ್ಲ. ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆ ಬಹಳ ತಡವಾಗಿದೆ. ಹಾಗಾಗಿ ಶೀಘ್ರವೇ ನೇಮಕ ಮಾಡುವಂತೆ ವರಿಷ್ಠರನ್ನು ಒತ್ತಾಯಿಸುತ್ತೇವೆ ಎಂದಷ್ಟೇ ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ