Kannada NewsKarnataka NewsLatest

*ಮತ್ತೊಂದು ಭೀಕರ ಅಪಘಾತ; ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹಳ್ಳೊಳ್ಳಿ ಕ್ರಾಸ್ ಬಳಿ ಸಂಭವಿಸಿದೆ.

ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ದುದನಿಯಿಂದ ಬರುತ್ತಿದ್ದ ಬೈಕ್ ಗೆ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.

Home add -Advt

ಮೃತರೆಲ್ಲರೂ ಅಫಜಲಪುರದಲ್ಲಿ ಫಾಸ್ಟ್ ಫುಡ್ ಮಾರಾಟ ಹೋಟೆಲ್ ನಡೆಸುತ್ತಿದ್ದರು. ನೇಪಾಳ ಮೂಲದ ಕುಟುಂಬ ಹಲವು ವರ್ಷಗಳಿಂದ ಅಫಜಲಪುರದಲ್ಲಿ ವಾಸವಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button