ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ವೀಕೆಂಡ್ ಬಂತೆಂದರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಆದರೆ ಮೂರು ದಿನಗಳ ಕಾಲ ರಾಜ್ಯ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಮೂರು ದಿನ ಪ್ರವೇಶ ನಿರಾಕರಿಸಲಾಗಿದೆ.
ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಚಂದ್ರದ್ರೋಣ ಪರ್ವತದ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ನವೆಂಬರ್ 6ವರೆಗೂ ನಿರ್ಬಂದಿಸಲಾಗಿದೆ. ದತ್ತಮಾಲೆ ಅಭಿಯಾನ ಹಿನ್ನೆಲೆಯಲ್ಲಿ ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ಹೋಮ-ಹವನ ಪೂಜಾ ಕೈಂಕರ್ಯಗಳು ನಡೆಯುತ್ತಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ