ಪ್ರಗತಿವಾಹಿನಿ ಸುದ್ದಿ; ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 128 ಜನರು ಸಾವನ್ನಪ್ಪಿದ್ದು 140ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ನೇಪಾಳ ರಾಜಧಾನಿ ಕಠ್ಮಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆಗಳಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದಲ್ಲಿ 128 ಜನರು ಮೃತಪಟ್ಟಿದ್ದು ಹಲವರು ಕಣ್ಮರೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಹಿದೆ.
ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮಡಿದವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ನೇಪಾಳಕ್ಕೆ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ಧವಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ