ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಆರಂಭದಲ್ಲಿಯೇ ವಿಘ್ನ ಉಂಟಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಮಾತ್ರ ಮೈತ್ರಿ ಮಾಡಿಕೊಳ್ಳಲಾಗುತ್ತದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಗೆ ಬಿಜೆಪಿ ಬೆಂಬಲ ನೀಡಲ್ಲ ಎಂದರು.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 12 ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಒಮ್ಮೆಯೂ ಗೆದ್ದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗಾಗಿ ಪ್ರಯತ್ನಿಸಲಾಗುವುದು ಎಂದರು.
ಯಾರೇ ಅಭ್ಯರ್ಥಿಗಳಾದರೂ ಪಕ್ಷದ ಗೆಲುವಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದ ಈಶ್ವರಪ್ಪ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ