ಡಿ.ಕೆ.ಶಿವಕುಮಾರ್ ಎಂ ಆಗೋದಾದ್ರೆ JDSನ 19 ಶಾಸಕರ ಬೆಂಬಲ ಎಂದ ಕುಮಾರಸ್ವಾಮಿ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಪರೇಷನ್ ಹಸ್ತ, ಅಧಿಕಾರ ಹಂಚಿಕೆ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ಸಂಚಲನ ಸೃಷ್ಟಿಸಿದೆ. ಡಿ.ಕೆ.ಶಿವಕುಮಾರ್ ಸಿಎಂ ಆಗೋದಾದ್ರೆ ಬೆಂಬಲ ನೀಡುತ್ತೇವೆ ಎಂದು ಓಪನ್ ಆಗಿ ಆಫರ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಡಿ.ಕೆ.ಶಿವಕುಮಾರ್, ಆಪರೇಷನ್ ಹಸ್ತದ ಮೂಲಕ ಜೆಡಿಎಸ್ ನ ಘಟಾನುಘಟಿ ನಾಯಕರನ್ನು ಕಾಂಗ್ರೆಸ್ ಗೆ ಸೆಳೆದುಕೊಳ್ಳುತ್ತಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸುತ್ತಾ ಯಾಕೆ ಡಿ.ಕೆ.ಶಿವಕುಮಾರ್ ನಮ್ಮ ಶಾಸಕರನ್ನು ಸಂಪರ್ಕ ಮಾಡುತ್ತೀರಿ? ನಾಳೆಯೆ ನೀವು ಮುಖ್ಯಮಂತ್ರಿಯಾಗುವುದಾದರೆ ಜೆಡಿಎಸ್ ನ 19 ಶಾಸಕರು ಬೆಂಬಲ ನೀಡಲು ಸಿದ್ಧ ಎಂದು ಘೋಷಿಸಿದರು.
ಇದೇ ವೇಳೆ ರಾಜ್ಯದಲ್ಲಿ ಟಿಸಿಎಂ ಹಾಗೂ ಡಿಸಿಎಂ ಎಂಬ ಎರಡು ರೀತಿಯಾಗಿದೆ. ಒಂದು ಟೆಂಪರವರಿ ಸಿಎಂ ಇನ್ನೊಂದು ಡೂಪ್ಲಿಕೇಟ್ ಸಿಎಂ ಎಂಬ ರೀತಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಜನರು ಬರಗಾಲದಿಂದ ತತ್ತರಿಸುತ್ತಿದ್ದಾರೆ ಅಭಿವೃದ್ಧಿ ಕೆಲಸ ಬಿಟ್ಟು ಇವರು ಕುರ್ಚಿಗಾಗಿ ಕಿತ್ತಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ