ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಡಿ.ಬಿ.ಚಂದ್ರೇಗೌಡ (87) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಬೆಂಗಳೂರಿನಲ್ಲಿದ್ದ ಚಂದ್ರೇಗೌಡ ಅವರನ್ನು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದಾರದಹಳ್ಳಿ ನಿವಾಸಕ್ಕೆ ಕರೆತರಲಾಗಿತ್ತು. ಇಂದು ಮುಂಜಾನೆ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಕೆಲ ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂದ್ರೇಗೌಡ ಅವರು, ಸಕ್ರಿಯ ರಾಜಕಾರಣದಿಂದ ದೂರವಿದ್ದರು. ಮೃತರು ಪತ್ನಿ, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
ಕರ್ನಾಟಕದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಚುನಾವಣೆಗೆ ಸ್ಪರ್ಧಿಸಲು ಮುಂದಾದಾಗ ತಮ್ಮ ಚಿಕ್ಕಮಗಳೂರು ಲೋಕಸಭಾ ಸದಸ್ಯ ಸ್ಥಾನವನ್ನೇ ಬಿಟ್ಟುಕೊಟ್ಟಿದ್ದರು.
ಮುತ್ಸದ್ದಿ ರಾಜಕಾರಣಿಯಾಗಿದ್ದ ಚಂದ್ರೇಗೌಡ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ