ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಅವಘಡವೊಂದು ಸಂಭವಿಸಿದೆ. ಸಾಂಬಾರ್ ಮಡಲು ತೊಗರಿ ಬೇಳೆ ಬೇಯಿಸಲು ಇಟ್ಟಿದ್ದ ಕುಕ್ಕರ್ ಸ್ಫೋಟಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನಲ್ಲಿ ನಡೆದಿದೆ.
ಮೆಟ್ರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಅಡಿಗೆ ಕೋಣೆಯಲ್ಲಿ ಬಿಸಿಯೂಟ ತಯಾರಿ ಮಾಡಲಾಗುತ್ತಿತ್ತು. ಈ ವೇಳೆ ಸಾಂಬಾರ್ ಗೆ ಬೇಳೆ ಬೇಯಿಸಲು ಕುಕ್ಕರ್ ನಲ್ಲಿ ಒಲೆ ಮೇಲೆ ಇಟ್ಟಿದ್ದರು. ಕೆಲ ಹೊತ್ತಲ್ಲೇ ಕುಕ್ಕರ್ ಸ್ಫೋಟಗೊಂಡಿದೆ. ಈ ಭೀಕರ ದೃಶ್ಯ ಬಿಸಿಯೂಟ ತಯಾರಿ ಕೊಠಡಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನೆಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ಮಹಿಳೆಯರು ಹೊರಗೋಡಿ ಪಾರಾಗಿದ್ದಾರೆ. ಗಾಯಾಳು ಮಹಿಳೆಯನ್ನು ಕಂಪ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ