Film & EntertainmentKannada NewsKarnataka NewsLatest

*ಬಿಗ್ ಬಾಸ್ ಮತ್ತೋರ್ವ ಸ್ಪರ್ಧಿ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಜನ್ -10ರ ಮತ್ತೋರ್ವ ಸ್ಪರ್ಧಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಪ್ರಕರಣ ದಾಖಲಾಗಿದೆ.

ಭೋವಿ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಭೋವಿ ಸಮಾಜದ ಪಿ.ಪದ್ಮಾ ಎಂಬುವವರು ತನಿಷಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕುಂಬಳಗೋಡು ಠಾಣೆಯಲ್ಲಿ ತನಿಷಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ತನಿಷಾ ಅವಹೇಳನಕಾರಿ ಪದ ಬಳಕೆ ಮಾಡಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹುಲಿ ಉಗುರು ಧರಿಸಿದ್ದ ಕಾರಣಕ್ಕೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು, ಅರಣ್ಯ ಅಧಿಕಾರಿಗಳಿಂದ ಬಂಧನದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಈಗ ಇನ್ನೋರ್ವ ಸ್ಪರ್ಧಿ ತನಿಷಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button