ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ರತಿವರ್ಷದಂತೆ ಈ ಬಾರಿಯೂ ಪಟಾಕಿ ಅವಾಂತರದಿಂದಾಗಿ ಬೆಂಗಳೂರಿನಲ್ಲಿ ಹಲವರು ಗಾಯಗೊಂಡಿದ್ದಾರೆ.
ನಿನ್ನೆ ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ 13 ಜನರು ಪಟಾಕಿಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರದಿಂದ ಈವರೆಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 60ಕ್ಕೂ ಹೆಚ್ಚು ಜನರು ಪಟಾಕಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಿಂಟೋ ಆಸ್ಪತ್ರೆಗೆ ದಾಖಲಾಗಿರುವ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಒಂದು ಕಣ್ಣಿನ ದೃಷ್ಟೀಯೇ ಕಳೆದುಕೊಳ್ಳುವ ಸಾಧ್ಯತೆ ಇದೆ. ಶ್ರೀರಾಂಪುರದ 18 ವರ್ಷದ ಯುವಕನ ಕಣ್ಣಿನ ಭಾಗಕ್ಕೆ ಹೆಚ್ಚು ಗಾಯಗಳಾಗಿವೆ. ಧರ್ಮಾವರಂ ನ 10 ವರ್ಷದ ಬಾಲಕಿಗೂ ಕಣ್ಣಿನ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ಇನ್ನು 22 ವರ್ಷದ ಯುವತಿಗೂ ಗಂಭೀರ ಗಾಯಗಳಾಗಿವೆ. ಮೂವರಿಗೂ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ