*ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಯ್ತು ಯತೀಂದ್ರ ಸಿದ್ದರಾಮಯ್ಯ ವಿಡಿಯೋ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ಒಂದು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಅದರಲ್ಲಿಯೂ ಯತೀಂದ್ರ ಸಿದ್ದರಾಮಯ್ಯ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ವಿಪಕ್ಷ ನಾಯಕರ ಆರೊಪಕ್ಕೆ ಈ ವಿಡಿಯೋ ಇನ್ನಷ್ಟು ಪುಷ್ಠಿ ನೀಡುವಂತಾಗಿದೆ.
ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಸಾರ್ವಜನಿಕ ಸಭೆಯೊಂದರಲ್ಲಿ ತಂದೆ ಸಿಎಂ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಮಾತನಾಡುತ್ತಾರೆ. ಅಲ್ಲದೇ ಮಹದೇವ್ ಎಂಬ ವಿಶೇಷ ಕರ್ತವ್ಯಾಧಿಕಾರಿಗೆ ಫೋನ್ ಕೊಡುವಂತೆ ಹೇಳಿ ಅವರೊಂದಿಗೆ ಮತನಾಡುತ್ತಾ ನಾನು ಹೇಳಿದ ಲಿಸ್ಟ್ ನದ್ದು ಮಾತ್ರ ಮಾಡಿ ಎಂದು ತಾಕೀತು ಮಾಡುತ್ತಾರೆ. ಈ ವಿಡಿಯೋ ತುಣುಕು ಇದೀಗ ವಿಪಕ್ಷ ನಾಯಕರ ಕೆಂಗಣ್ಣಿಗೆ ಕಾರಣವಾಗಿದೆ.
ಸಿಎಂ ಹಾಗೂ ಸಿಎಂ ಪುತ್ರನ ವಸೂಲಿ ದಂಧೆ ಹಾದಿಬೀದಿಯಲ್ಲಿ ಬಹಿರಂಗವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ವಿರುದ್ಧ ಬಿಜೆಪಿ ನಾಯಕರೂ ಮುಗಿಬಿದ್ದು ವಾಗ್ದಾಳಿ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ