ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನಿಂದ ಯುವತಿಗೆ ವಂಚನೆ ಮಡಲಾಗಿದೆ ಎಂದು ಆರೋಪಿಸಿ ಯುವತಿ ಬೆಂಗಳೂರಿನ ಬಸವನಗುಡಿ ಪೊಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮೈಸೂರು ಮಹಾರಾಜಾ ಕಾಲೇಜು ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್, ಬೆಂಗಳೂರು ಮೂಲದ ಯುವತಿಗೆ ಪ್ರೀತಿ, ಪ್ರೇಮದ ಹೆಸರಲ್ಲಿ ವಂಚಿಸಿದ್ದಾರೆ. ಅಲ್ಲದೇ ಮದುವೆಯಾಗುವುದಾಗಿ ನಂಬಿಸಿ ಹೋಟೆಲ್ ಗೆ ಕರೆದೊಯ್ದು ಲೈಂಗಿಕವಾಗಿಯೂ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಒಂದುವರೆ ವರ್ಷದ ಹಿಂದೆ ಪಾರ್ಟಿಯಲ್ಲಿ ಪರಿಚಯವಾಗಿದ್ದ ರಂಗನಾಥ್, ಬಳಿಕ ಯುವತಿಯೊಂದಿಗೆ ಸ್ನೇಹ, ಪ್ರೀತಿಯಾಗಿದ್ದು ಮದುವೆಯಾಗುವುದಾಗಿ ಹೇಳಿದ್ದ. ಮೈಸೂರಿನಲ್ಲಿ ಲಾಡ್ಜ್ ಗೆ ಕರೆದೊಯ್ದು ಲೈಂಗಿಕವಾಗಿಯೂ ಬಳಸಿಕೊಂಡಿದ್ದಾರೆ. ಈಗ ಮದುವೆಯಾಗಲು ನಿರಾಕರಿಸುತ್ತಿದ್ದು, ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಇನ್ನು ಪ್ರಕರಣ ಸಂಬಂಧ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಸಂತ್ರಸ್ತ ಯುವತಿ ಹಾಗೂ ಆರೋಪಿ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ.
ಈ ನಡುವೆ ಸಂಸದರ ಪುತ್ರ ರಂಗನಾಥ್ ಕೂಡ ಮೈಸೂರಿನಲ್ಲಿ ಯುವತಿ ವಿರುದ್ಧ ಬ್ಲ್ಯಾಕ್ ಮೇಲ್ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ