ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಬಂಧನ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು, ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
2ನೇ ಪೋಕ್ಸ್ ಕೇಸ್ ನಲ್ಲಿ ಮುರುಘಾ ಶ್ರೀಗಳ ವಿರುದ್ಧ ಚಿತ್ರದುರ್ಗ ಕೋರ್ಟ್ ಬಂಧನ ವಾರಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲಿಸರು ಡಾ.ಶಿವಮೂರ್ತಿ ಮುರುಘಾ ಶ್ರೀಗಳನ್ನು ಬಂಧಿಸಿದ್ದರು.
ಬಂಧನ ಬಳಿಕ ಚಿತ್ರದುರ್ಗ ನ್ಯಾಯಾಲಯಕ್ಕೆ ಮುರುಘಾ ಶ್ರೀಗಳನ್ನು ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಮುರುಘಾ ಶ್ರೀಗಳನ್ನು ಡಿ.2ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತ್ತು.
ಈ ಬೆಳವಣಿಗೆ ಬೆನ್ನಲ್ಲೇ ಹೈಕೋರ್ಟ್ 2ನೇ ಪೋಕ್ಸೋ ಕೇಸ್ ನಲ್ಲಿ ಮುರುಘಾ ಶ್ರೀ ಬಂಧನ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಮೊದಲ ಪೋಕ್ಸೋ ಕೇಸ್ ನಲ್ಲಿ ಷರತ್ತುಬದ್ಧ ಜಾಮೀನು ನೀಡಿದ್ದ ಹೈಕೋರ್ಟ್, 2ನೇ ಪೋಕ್ಸೋ ಕೇಸ್ ನಲ್ಲಿ ಬಾಡಿ ವಾರಂಟ್ ಇರುವುದರಿಂದ ಜೈಲಿನಲ್ಲಿ ಇರಿಸಿಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ 2ನೇ ಕೇಸ್ ಗೆ ಸಂಬಂಧಿಸಿದಂತೆ ಇನ್ನೂ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿತ್ತು.
ಆದರೆ ಇಂದು ಚಿತ್ರದುರ್ಗ ಕೋರ್ಟ್ ಮುರುಘಾ ಶ್ರೀ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ಮುರುಘಾ ಶ್ರೀ ಬಂಧನವಾಗುತ್ತಿದ್ದಂತೆ ಶ್ರೀಗಳ ಪರ ವಕೀಲರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. ಇದೀಗ ಚಿತ್ರದುರ್ಗ ಕೋರ್ಟ್ ಬಂಧನ ಆದೆಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ