Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋದ ಕವಿದ ವಾತಾವರಣವಿದ್ದು, ನ.22ರಂದು ಮಳೆಯಾಗುವ ಸಾಧ್ಯತೆ ಇದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button