Kannada NewsKarnataka NewsLatest

*ವಿದ್ಯುತ್ ತಂತಿಗೆ ತಾಯಿ-ಮಗು ಸಾವು ಪ್ರಕರಣ; ಬೆಸ್ಕಾಂ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಾಲ್ಕು ದಿನಗಳ ಹಿಂದೆ ವಿದ್ಯುತ್ ತಂತಿ ತಗುಲಿ ತಾಯಿ ಹಾಗೂ ಮಗು ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಬೆಸ್ಕಾಂ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನ ವೈಟ್ ಫೀಲ್ಡ್ ನ ಕಾಡುಗೋಡಿ ಬಳಿ ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ತಾಯಿ ಹಾಗೂ 9 ತಿಂಗಳ ಮಗು ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಸಜೀವ ದಹನವಾಗಿದ್ದರು. ಈ ಪ್ರಕರಣ ಸಂಬಂಧ ಈಗಾಗಲೇ ಬೆಸ್ಕಾಂ ನ 5 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಅಲ್ಲದೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕೂಡ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ನೋಟಿಸ್ ಜಾರಿ ಮಾಡಿತ್ತು. ಇದೀಗ ಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಬೆಸ್ಕಾಂ ನ 7 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಸ್ಕಾಂ ಎಂಡಿ ಸೇರಿ 7 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟಿಲ್, 2 ವರಗಳಲ್ಲಿ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button