Kannada NewsKarnataka NewsLatest

*ಶಾಲೆಯ ಮೊದಲ ಮಹಡಿಯಿಂದ ಬಿದ್ದು 5 ವರ್ಷದ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಶಾಲೆಯ ಮೊದಲ ಮಹಡಿಯಿಂದ ಬಿದ್ದು 5 ವರ್ಷದ ಬಾಲಕ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಆರ್.ಎಂ.ಶಹಾ ಶಾಲೆಯಲ್ಲಿ ನಡೆದಿದೆ.

ಶಿವರಾಜ್ ರೋಡಗಿ ಮೃತ ಬಾಲಕ. ಆರ್.ಎಂ.ಶಹಾ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದ. ಎಂದಿನಂತೆ ಇಂದು ಶಾಲೆಗೆ ಬಂದಿದ್ದ ಬಾಲಕ ಬೆಳಿಗ್ಗೆ ಶಾಲೆಯ ಮೊದಲ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾನೆ.

Home add -Advt

ತಕ್ಷಣ ಶಾಲೆಯ ಆಡಳಿತ ಮಂಡಳಿಯವರು ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಬಾಲಕ ಆಸ್ಪತ್ರೆಗೆ ಬರುವ ಮೊದಲೇ ಕೊನೆಯುಸಿರೆಳೆದಿದ್ದಾನೆ. ಶಾಲಾ ಆಡ್ಳಿತ ಮಂಡಳಿಯವರು ಬಾಲಕನ ಶವವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ತೆರಳಿದ್ದಾರೆ. ಬಳಿಕ ಪೋಷಕರಿಗೆ ಕರೆ ಮಾಡಿ ವಿಷಯ ಹೇಳಿದ್ದಾರೆ. ಆಸ್ಪತ್ರೆಗೆ ಆಗಮಿಸಿದ ಪೋಷಕರು ಶಾಲೆಯ ಆಡಳಿತ ಮಂಡಳಿಯ ಅಮಾನವೀಯತೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನುಷತ್ವವೇ ಇಲ್ಲದಂತೆ ಬಾಲಕನ ಶವವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಶಾಲಾ ಆಡಳಿತಮಂಡಳಿಯವರು ತೆರಳಿರುವುದು ಸರಿಯಲ್ಲ ಎಂದು ಪ್ರತಿಭಟನೆ ನಡೆಸಿದ್ದಾರೆ.


Related Articles

Back to top button