Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವೆಡೆಗಳಲ್ಲಿ ನವೆಂಬರ್ 28ವರೆಗೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನು ಉತ್ತರ ಒಳನಾಡಿನ ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಮಂಡ್ಯ ಜಿಲ್ಲೆಯಲ್ಲಿ ಒಣಹವೆ ಬೀಸಲಿದೆ ಎಂದು ತಿಳಿದುಬಂದಿದೆ.


Related Articles

Back to top button