Belagavi NewsBelgaum NewsKannada NewsKarnataka NewsLatestPolitics

*ರೇಷ್ಮೆ ಇಲಾಖೆ-ಕೃಷಿ ಇಲಾಖೆ ವಿಲೀನಕ್ಕೂ ಗ್ಯಾರಂಟಿ ಯೋಜನೆಗಳಿಗೂ ಯಾವುದೇ ಸಂಬಂಧವಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ಹತ್ತು ವರ್ಷಗಳ ಹಿಂದೆಯೇ ನಡೆದಿದೆ. ಗ್ಯಾರಂಟಿ ಯೋಜನೆಗಳಿಗೂ ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಂದಿಗೆ ವಿಲೀನಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.

ನಗರದ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಉದ್ಯಾನವನ ಬಳಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಎಲ್ಲ ಸರ್ಕಾರಗಳಲ್ಲಿ ಕೆಲ ಇಲಾಖೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆ ನಡೆದಿದೆ ಎಂದರು.

ಕಾಂತರಾಜು ವರದಿ ಸ್ವೀಕರಿಸಿದರೆ ಕಾಂಗ್ರೆಸ್‌ ಸರ್ಕಾರಕ್ಕೆ ತೊಂದರೆ ಆಗುತ್ತೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಾತಿ ಜನಗಣತಿ ವರದಿಯನ್ನು ಕಾಂತರಾಜು ಅವರು ಸರ್ಕಾರಕ್ಕೆ ನೀಡಬೇಕು. ಅದರ ಪರ-ವಿರೋಧ ಚರ್ಚೆ ನಡೆಯಬೇಕು. ಮುಂದೆ ನೋಡೋಣ. ಅದರ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಚರ್ಚೆ ಮಾಡುತ್ತಾರೆ. ಇನ್ನುಡಿಸೆಂಬರ್ 4 ರಿಂದ 15 ರವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯಲಿದ್ದು, ಜಿಲ್ಲಾಡಳಿತ, ನಗರ ಪೊಲೀಸ್‌ ಇಲಾಖೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿದೆ ಎಂದು ತಿಳಿಸಿದರು.

Home add -Advt

Related Articles

Back to top button