Kannada NewsKarnataka NewsLatestPolitics

*ಜನತಾದರ್ಶನ: ಅಂಧ ಮಕ್ಕಳ ಶಾಲೆಗೆ ನಿವೇಶನ ಮಜೂರು ಮಾಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತಾದರ್ಶನ ಕಾರ್ಯಕ್ರಮದಲ್ಲಿ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ.

ಅಂಧಮಕ್ಕಳಿಗೆ ನೆಮ್ಮದಿಯ ಸೂರು ಕಲ್ಪಿಸುವಂತೆ ರಾಣೆಬೆನ್ನೂರಿನ ಜೀವ ಬೆಳಕು ಅಂಧ ಮಕ್ಕಳ ಸಂಸ್ಥೆ ಜನತಾ ದರ್ಶನದಲ್ಲಿ ಮುಖ್ಯಮಂತ್ರಿ ಸಿದದ್ದಮಯ್ಯನವರಿಗೆ ಅಂಧ ಮಕ್ಕಳ ಶಾಲೆಗೆ ಸಿ ಎ ನಿವೇಶನ ಮಂಜೂರಾಗಿದ್ದು, ಇದಕ್ಕಾಗಿ 9 ಲಕ್ಷ ರೂಪಾವತಿಸುವಂತೆ ಸೂಚಿಸಿದ್ದಾರೆ. ಹಣ ಪಾವತಿಸಲು ಶಕ್ತರಿಲ್ಲದ ಕಾರಣ ಹಣ ಪಾವತಿಯಿಮ್ದ ವಿನಾಯಿತಿ ನೀಡುವಂತೆ ಮನವಿ ಮಾಡಿತು.

Home add -Advt

ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಆನ್ ಲೈನ್ ಮೂಲಕ ಹಾವೇರಿ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಮೂಲಕ ಅಂಧ ಮಕ್ಕಳ ಬದುಕಿಗೆ ನೆಮ್ಮದಿಯ ಸೂರು ಕಲ್ಪಿಸಿದರು.


Related Articles

Back to top button