Kannada NewsKarnataka NewsLatestPolitics

*ಕಂಡೀಷನ್ ಹಾಕಿ ಕನ್ನಡಿಗರಿಗೆ ಮೋಸ; ತೆಲಂಗಾಣದ ದಿನಪತ್ರಿಕೆಗಳಲ್ಲಿ ಜಾಹೀರಾತು ಕೊಡಲು ರಾಜ್ಯದ ಬೊಕ್ಕಸ ದುರ್ಬಳಕೆ; ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಬೊಕ್ಕಸ ಬರಿದು ಮಾಡಿ ಕನ್ನಡಿಗರ ಪಾಲಿಗೆ ಹೆಮ್ಮಾರಿಯಾಗಿರುವ ಕಾಂಗ್ರೆಸ್ ಸರ್ಕಾರ ಪಕ್ಕದೂರಿಗೆ ಉಪಕಾರಿಯಾಗುವ ಫೋಸ್ ಕೊಡಲು ಹೊರಟಿರುವುದು ಕರ್ನಾಟಕದ ದುರಂತವೇ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

ಗ್ಯಾರೆಂಟಿಗಳನ್ನು ಜಾರಿ ಮಾಡಲಾಗದೆ ದಿನಕ್ಕೊಂದು ಕುಂಟು ನೆಪ, ನೂರೆಂಟು ಕಂಡೀಷನ್ ಹಾಕಿ ಕನ್ನಡಿಗರಿಗೆ ಮೋಸ ಮಾಡಿರುವ ಕಾಂಗ್ರೆಸ್ ಪಕ್ಷ, ಎಲ್ಲಾ 5 ಗ್ಯಾರೆಂಟಿಗಳನ್ನೂ ಚಾಚೂ ತಪ್ಪದೆ ಜಾರಿ ಮಾಡಿಬಿಟ್ಟಿದ್ದೇವೆ ಎಂದು ಸತ್ಯದ ತಲೆಯ ಮೇಲೆ ಹೊಡೆದಂತೆ ಸುಳ್ಳು ಜಾಹೀರಾತು ನೀಡುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಟ್ವೀಟ್ ಮೂಲಕ ಗುಡುಗಿದ್ದಾರೆ.

ಒಂದು ಕಡೆ ರಾಜ್ಯದ ಅಭಿವೃದ್ಧಿಗೆ ಹಣವಿಲ್ಲದೆ ಜನರ ಮುಂದೆ ಮೊಸಳೆ ಕಣ್ಣೀರು ಹಾಕುತ್ತಿರುವ ಕಾಂಗ್ರೆಸ್ ಸರ್ಕಾರ, ಮತ್ತೊಂದೆಡೆ ತೆಲಂಗಾಣ ರಾಜ್ಯದ ದಿನಪತ್ರಿಕೆಗಳಲ್ಲಿ ಜಾಹೀರಾತು ಕೊಡಲು ರಾಜ್ಯದ ಬೊಕ್ಕಸ ದುರ್ಬಳಕೆ ಮಾಡಿಕೊಂಡು ಚುನಾವಣಾ ಆಯೋಗದಿಂದ ಛೀಮಾರಿ ಹಾಕಿಸಿಕೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.


Related Articles

Back to top button