ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಚಂಡಮಾರುತ ಸೃಷ್ಟಿಯಾಗಿದೆ. ಇದರ ನೇರ ಪರಿಣಾಮ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಒಡಿಶಾ ಮೇಲೆ ಬೀಳಲಿದೆ. ಚಂಡಮಾರುತ ಹಿನ್ನೆಲೆಯಲ್ಲಿ ತಮಿಳುನಾಡು ಭಾಗದಲ್ಲಿ ಭಾರಿ ಮಳೆಯಾಗಲಿದೆ.
ಬಂಗಾಳಕೊಲ್ಲಿಯಲ್ಲಿ 18 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಆಂಧ್ರದ ನೆಲ್ಲೂರು, ಮಚಲಿಪಟ್ಟಣದ ಕರಾವಳಿಗೆ ಮೈಚುಂಗ್ ಚಂಡಮಾರುತ ಅಪ್ಪಳಿಸಲಿದೆ. ಗಂಟೆಗೆ 100 ಕಿ.ಮೀ ವೇಗದಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ವಾಯುಭಾರ ಕುಸಿತದಿಂದ ಚಂದಮಾರು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕೆಲ ರಾಜ್ಯಗಳ ಮೇಲೂ ಪರಿಣಾಮ ಬೀರಲಿದ್ದು, ಕೆಲ ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ