Kannada NewsKarnataka NewsLatest
*ರಾಜ್ಯದಲ್ಲಿ ಮೈಕೊರೆಯುವ ಚಳಿ; ಮೂರು ದಿನಗಳ ಬಳಿಕ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*
ಬೆಂಗಳೂರು: ತಮಿಳುನಾಡು, ಆಂಧ್ರಪ್ರದೇಶದಲ್ಲಿ ಮಿಚಾಂಗ್ ಚಂಡಮಾರುತಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಎರಡೂ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಚಂಡಮಾರುತದ ಅಬ್ಬರಕ್ಕೆ 12ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಮಿಚಾಂಗ್ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಪ್ರಭಾವ ಬೀರುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ವಿಪರೀತ ಚಳಿ ಆರಂಭವಾಗಿದೆ.
ಇನ್ನು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ 10ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಧರವಾಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ