Kannada NewsKarnataka NewsLatestPolitics

*ಇದೊಂದು ನಿರಾಧಾರ ಆರೊಪ; ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಆರ್.ಎಸ್.ಎಸ್ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಾತಿ ಕಾರಣಕ್ಕೆ ನಾಗಪುರದ ಆರ್.ಎಸ್.ಎಸ್ ಸ್ಮಾರಕ ಕಟ್ಟಡಕ್ಕೆ ತನಗೆ ಪ್ರವೇಶ ನಿರಾಕರಿಸಲಾಗಿತ್ತು ಎಂಬ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿಕೆಗೆ ಆರ್.ಎಸ್.ಎಸ್ ಸ್ಪಷ್ಟನೆ ನೀಡಿದೆ.

ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಆಡಿಯೋ ಹೇಳಿಕೆಯಲ್ಲಿ ‘ ತಮಗೆ ಜಾತಿ ಕಾರಣಕ್ಕೆ ನಾಗಪುರದ ಡಾ.ಹೆಡಗೇವಾರ್ ಸ್ಮಾರಕ ಕಟ್ಟಡದಲ್ಲಿ ಪ್ರವೇಶ ನಿರಾಕರಿಸಲಾಯಿತು’ ಎಂದು ಆರೋಪಿಸಿದ್ದಾರೆ. ನಾಗಪುರದಲ್ಲಿ ಸಂಘ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ. ಇದೊಂದು ನಿರಾಧಾರ, ಹುರುಳಿಲ್ಲದ ಆರೋಪ ಎಂದಿದೆ.

ಆರ್.ಎಸ್.ಎಸ್ ನ ಯಾವುದೇ ಕಚೇರಿಯಲ್ಲಾಗಲಿ, ಅಥವಾ ಈ ರೀತಿಯ ಸ್ಮಾರಕ ಕಟ್ಟಡಗಳಲ್ಲಾಗಲಿ ಎಲ್ಲರಿಗೂ ಮುಕ್ತ ಪ್ರವೇಶವಿದೆ. ಎಲ್ಲಾ ಜಾತಿ, ವರ್ಗದ ಸಾವಿರಾರು ಜನ ನಿತ್ಯ ಬಂದು ಹೋಗುತ್ತಲೇ ಇದ್ದಾರೆ. ಯಾರಿಗೂ ಪ್ರವೇಶ ನಿರಾಕರಣೆಯ ಪ್ರಶ್ನೆಯೇ ಬಂದಿಲ್ಲ.

ಇಷ್ಟಾಗಿ ರಾಜ್ಯ ವಿಧಾನಸಭೆಗೆ 4 ತಿಂಗಳು ಮೊದಲು ಈ ಘಟನೆ ನಡೆದಿತ್ತು ಎನ್ನುವ ಗೂಳಿಹಟ್ಟಿ ಶೇಖರ್ ಅವರು ಆನಂತರ ಅನೇಕ ಸಂಘದ ಮುಖಂಡರನ್ನು ಭೇಟಿಯಾದರೂ ಎಲ್ಲಿಯೂ ತಮಗಾದ ಈ ಅವಮಾನದ ಬಗ್ಗೆ ಹೇಳಿರಲಿಲ್ಲ. ಈಗ ಹತ್ತು ತಿಂಗಳ ನಂತರ ಈ ರೀತಿ ಹೇಳಿಕೆ ನೀಡಿರುವುದು ಆಶ್ಚರ್ಯವಾಗಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಎಲ್ಲರನ್ನೂ ಸದಾ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ ಎಂದು ಸ್ಪಷ್ಟನೆ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button